Home Kannada ಹುಬ್ಬಳ್ಳಿಯ ಉಣಕಲ್ ಬಳಿ ಕಾರು, ಬೈಕ್​ ಅಪಘಾತ : ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹುಬ್ಬಳ್ಳಿಯ ಉಣಕಲ್ ಬಳಿ ಕಾರು, ಬೈಕ್​ ಅಪಘಾತ : ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

by akash

ಹುಬ್ಬಳ್ಳಿ : ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕ್ರಾಸ್​ನ ಪ್ರೆಸಿಡೆಂಟ್ ಹೋಟೆಲ್ ಮುಂಭಾಗದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಹೋಗುತ್ತಿರುವಾಗ ಬೈಕ್ ಸವಾರ ಮುಂದೆ ಹೊರಟು ತಕ್ಷಣವೇ ಬೈಕ್ ರಿಟರ್ನ್ ತೆಗೆದುಕೊಂಡಿದ್ದಾನೆ. ಇದರಿದ ಹಿಂದೆ ಬರುತ್ತಿದ್ದ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರರು ಗಾಳಿಯಲ್ಲಿ ಹಾರಿ ಬಿದಿದ್ದಾರೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Related Posts

Leave a Comment