Home Kannada ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರಿಗೆ ಥಳಿತ

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರಿಗೆ ಥಳಿತ

by akash

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಣಕಲ್ ಹತ್ತಿರದ ಶೆಲ್ ಪೆಟ್ರೋಲ್ ಬಂಕ್​​ ಬಳಿ ನಡೆದಿದೆ. ಬೈಕ್​ಗೆ ಪೆಟ್ರೋಲ್ ಹಾಕಿಸಲು ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ ಬೈಕ್​​ಗೆ ಬೈಕ್ ತಾಗಿದೆ ಎನ್ನಲಾಗಿದೆ. ಈ ಕಾರಣಕ್ಕೆ ಇಬ್ಬರು ಯುವಕರನ್ನು ಥಳಿಸಿದ್ದಾರೆ. ಈ ವೇಳೆ ಜಗಳ ಬಿಡಿಸಲು ಬಂದ ಸ್ಥಳೀಯರಿಗೂ ಅವಾಜ್ ಹಾಕಿದ್ದಾರೆ. ಆಗ ಸ್ಥಳೀಯರು ಪ್ರತಿರೋಧ ಒಡ್ಡಿದ್ದು, ಯುವಕರ ಗುಂಪು ಅಲ್ಲಿಂದ ತೆರಳಿದೆ. ಈ ಘಟನೆಯಿಂದಾಗಿ ಪೆಟ್ರೋಲ್ ಬಂಕ್​ನಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಣೇಶ್ ಹಾಗೂ ನಾರಾಯಣ ಎಂಬ ಯುವಕರು ಹಲ್ಲೆಗೆ ಒಳಗಾಗಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

Leave a Comment