Home Kannada ಹು-ಧಾ ಪಾಲಿಕೆ ಮಾಜಿ ಮೇಯರ್ ಸುಧೀರ್​ ಸರಾಫ್ ನಿಧನ

ಹು-ಧಾ ಪಾಲಿಕೆ ಮಾಜಿ ಮೇಯರ್ ಸುಧೀರ್​ ಸರಾಫ್ ನಿಧನ

by Eha

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್, ಬಿಜೆಪಿ ಮುಖಂಡ ಸುಧೀರ್​ ಸರಾಫ್ ನಿಧನರಾಗಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಸುಧೀರ್​ ಸರಾಫ್, ಬೋನ್ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದ ನಂತರ ತೀವ್ರ ಅಸ್ವಸ್ಥರಾಗಿದ್ದದ್ದು, ಇಂದು ಕೊನೆಯುಸೆಳೆದಿದ್ದಾರೆ. ಸುಧೀರ್​​ ಸರಾಫ್ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

Related Posts

Leave a Comment