Home Kannada ಹೊಸಪೇಟೆ: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

ಹೊಸಪೇಟೆ: ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

by akash

ಹೊಸಪೇಟೆ (ಬಳ್ಳಾರಿ): ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ತಿಮ್ಮಲಾಪುರದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ಹಸು ಮೇಯಿಸಲು ತೆರಳುತ್ತಿದ್ದ ಪಾದಚಾರಿಯ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ತಿಮ್ಮಲಾಪುರದ ನಿವಾಸಿ ಕುಮಾರೆಪ್ಪ (42) ಎಂದು ಗುರುತಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಪರಾರಿಯಾಲು ಯತ್ನಿಸಿದ್ದು, ಕೊಪ್ಪಳದ‌ ಮುನಿರಾಬಾದ್ ಟೋಲ್ ಗೇಟ್ ಬಳಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಕುರಿತು ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಸವಾರ ಸಾವು ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ 50ರ ಗಾಳೆಮ್ಮನಗುಡಿ ಬಳಿ ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹೊಸಪೇಟೆಯ ಮೆಹಬೂಬ್ ನಗರದ ನಿವಾಸಿ ಮಹಮ್ಮದ್ ಹುಸೇನ್ (28) ಮೃತ ವ್ಯಕ್ತಿ. ಭಾನುವಾರ ತಡರಾತ್ರಿ ಬಿಎಂಎಂ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಹೊಸಪೇಟೆಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ. ಟಿಪ್ಪರ್​​ನೊಂದಿಗೆ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಮರಿಯಮ್ಮನಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment