Home Kannada ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ : ಇಬ್ಬರು ಸಾವು, 10 ಮಂದಿಗೆ ಗಾಯ

ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ : ಇಬ್ಬರು ಸಾವು, 10 ಮಂದಿಗೆ ಗಾಯ

by Eha

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಬಡೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಾವಗಡ ತಾಲೂಕಿನ ಕರೇಕ್ಯಾತನಹಳ್ಳಿ ಗ್ರಾಮದ ಉಗ್ರಪ್ಪ (55) ಮತ್ತು ರಮೇಶ್ (40) ಎಂದು ಗುರುತಿಸಲಾಗಿದೆ. ತೊಗರಿಗುಂಟೆ ಗ್ರಾಮದಿಂದ ಪಾವಗಡಕ್ಕೆ ಹುಣಸೆಹಣ್ಣು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್​ ವಾಹನ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Comment