Home Kannada 62 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಚಾಕುವಿನಿಂದ ಹಲ್ಲೆ

62 ವರ್ಷದ ವೃದ್ಧೆ ಮೇಲೆ ಅತ್ಯಾಚಾರ: ಚಾಕುವಿನಿಂದ ಹಲ್ಲೆ

by Eha

ಗ್ವಾಲಿಯರ್​ (ಮಧ್ಯಪ್ರದೇಶ): 62 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನ ಭಗವಾನ್‌ಪುರ ಗ್ರಾಮದಲ್ಲಿ ನಡೆದಿದೆ. ಕೆಲಸದ ನೆಪದಲ್ಲಿ ವೃದ್ಧೆಯನ್ನು ನಿನ್ನೆ ಬೆಟ್ಟದ ಮೇಲೆ ಆರೋಪಿ ಕರೆದೊಯ್ದಿದ್ದು, ಇಂದು ಬೆಳಗ್ಗೆಯ ವರೆಗೂ ಅವರಿಗೆ ಹಿಂಸೆ ನೀಡಿ ಪರಾರಿಯಾಗಿದ್ದಾನೆ. ಅರೆಬೆತ್ತಲೆ ಸ್ಥಿತಿಯಲ್ಲಿ ಗಾಯಗೊಂಡು ಬಿದ್ದಿದ್ದ ವೃದ್ಧೆಯನ್ನು ನೋಡಿದ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಂತ್ರಸ್ತೆಯ ಹೇಳಿಕೆ ರೆಕಾರ್ಡ್ ಮಾಡಿಕೊಂಡಿದ್ದಾರೆ. ಆರೋಪಿಯು ಒಬ್ಬ ಮಿಠಾಯಿವಾಲಾ ಎಂದು ತಿಳಿದು ಬಂದಿದ್ದು, ಆತನನ್ನು ಬಂಧಿಸಿರುವ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

Related Posts

Leave a Comment