Home Kannada ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಣೆ: ಒಬ್ಬನ ಬಂಧನ

ದುಬೈನಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಣೆ: ಒಬ್ಬನ ಬಂಧನ

by Eha

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುರುಡೇಶ್ವರದ ಮುಹಮ್ಮದ್ ಅವಾನ್ ಬಂಧಿತ ಆರೋಪಿ. ಈತ ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ. ಈತನನ್ನು ತಪಾಸಣೆ ನಡೆಸಿದಾಗ ಟ್ರಾಲಿ ಬ್ಯಾಗ್​​ನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 16,52,000 ರೂಪಾಯಿ ಮೌಲ್ಯದ 350 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Related Posts

Leave a Comment